ಸುದ್ದಿ9 ಕೈಕಂಬ : ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಮಂಗಳೂರು ಹಾಗೂ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆಯ ವತಿಯಿಂದ ಶನಿವಾರ ಪೂರ್ವಾಹ್ನ ಎಡಪದವಿನ ಕೊಂದೋಡಿ ಎಂಬಲ್ಲಿ ಹೋಬಳಿ ಮಟ್ಟ ಕೃಷಿ ಯಂತ್ರೋಪರಕರಣಗಳ ಬಾಡಿಗೆ ಆಧಾರಿತ ಸೇವಾಕೇಂದ್ರದ ಉದ್ಘಾಟನೆ ಹಾಗೂ ಭೂಚೇತನ ಯೋಜನೆಯ ಹೋಬಳಿ ಮಟ್ಟದ ಕಾಯರ್ಾಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಅರಣ್ಯ ಸಚಿವರಾದ ಬಿ. ರಮಾನಾಥ ರೈ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತಾಡಿದ ರಮಾನಾಥ ರೈ ಅವರು ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಾಗೂ ಕೃಷಿ ಉತ್ಪನ್ನಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆ ಕೃಷಿಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಕೃಷಿಕರಿಗೆ ಪೂರೈಸುತ್ತಿದೆ. ಇದರ ಸದುಪಯೋಗವನ್ನು ಪ್ರತಿಯೋರ್ವ ರೈತರೂ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ಬಳಿಕ ಶಾಸಕರಾದ ಬಿ.ಎ. ಮೊಯ್ದೀನ್ ಬಾವಾ ಮಾತಾಡಿ ಕೃಷಿ ಚಟುವಟಿಕೆಗಳನ್ನು ಮಾಡಲು ಕೂಲಿಯಾಳುಗಳ ಸಮಸ್ಯೆ ಕಾಡುತ್ತಿದ್ದ ಕೃಷಿ ಚಟುವಟಿಕೆ ಕುಂಠಿತವಾಗುತ್ತಿದೆ. ಕೃಷಿಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಪಡೆದು ರೈತರು ಉತ್ತಮ ಬೆಳೆಯನ್ನು ಪಡೆದುಕೊಳ್ಳಬೇಕು ಎಂದು ರೈತರಿಗೆ ಕರೆ ನೀಡಿದ್ದಾರೆ.
ಕೃಷಿ ಕಾರ್ಯಕ್ರಮಕ್ಕೆ ವರುಣ ಕೃಪೆ ತೋರಿದ್ದರಿಂದ ಸ್ವಲ್ಪ ಗೊಂದಲವಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಯ್ದೀನ್ ಬಾವಾ ವಹಿಸಿದ್ದರು. ಜಿ.ಪಂ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಯೋಜನಾಧಿಕಾರಿ ರಾಘವ ಎಂ., ಎಡಪದವು ಗ್ರಾ.ಪಂ. ಅಧ್ಯಕ್ಷ ರಾಮಣ್ಣ ಶೆಟ್ಟಿ, ತಾ.ಪಂ. ಉಪಾಧ್ಯಕ್ಷ ಪ್ರಕಾಶ್, ಜಿ.ಪಂ ಸದಸ್ಯರಾದ ಜನಾರ್ದನ ಗೌಡ, ಕೃಷಿ ಸಂಶೋಧನಾ ಕೇಂದ್ರದ ಹರೀಶ್ ಶೆಣೈ ಮುಂತಾದವರು ಉಪಸ್ಥಿತರಿದ್ದರು.






