ನಾಗ್ಪುರ: ಮಹಾರಾಷ್ಟ್ರದ ಮುಖ್ಯಮಂತ್ರಿ ಯಾರಾಗ್ತಾರೆ? ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಆದರೆ, ಶನಿವಾರಗಡ್ಕ ರಿ ಅವರು ರಾಷ್ಟ್ರೀಯ ಸ್ವಯಂಸೇವಕ್ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

gadkari.

ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ದೇವೇಂದ್ರ ಫಡ್ನವಿಸ್ ಅವರನ್ನು ನಿನ್ನೆ ಭೇಟಿ ಮಾಡಿದ ನಂತರ ಗಡ್ಕರಿ ಭಾಗ್ವತ್ ಅವರನ್ನು ಭೇಟಿಯಾಗಿರುವುದು ಹಲವಾರು ಊಹಾಪೋಹಗಳನ್ನು ಸೃಷ್ಟಿಸಿದೆ.

ಆದಾಗ್ಯೂ, ತಾನು ದೀಪಾವಳಿ ಶುಭಾಶಯಗಳನ್ನು ತಿಳಿಸುವುದಕ್ಕಾಗಿಯೇ ಭಾಗ್ವತ್ ಅವರನ್ನು ಭೇಟಿ ಮಾಡಿದ್ದೆ ಎಂದು ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ.

ಇನ್ನೊಂದೆಡೆ ಮುಖ್ಯಮಂತ್ರಿ ಸ್ಥಾನಕ್ಕೆ ಫಡ್ನವಿಸ್ ಅವರನ್ನು ಆರೆಸ್ಸೆಸ್ಸ್ ಬೆಂಬಲಿಸುವುದರ ಬಗ್ಗೆ ಭಾಗ್ವತ್ ಮತ್ತು ಗಡ್ಕರಿ ನಡುವಿನ ಭೇಟಿ ನಡೆದಿದೆ ಎಂದು ಹೇಳಲಾಗುತ್ತಿದೆ.

By Suddi9

Leave a Reply

Your email address will not be published. Required fields are marked *