ಮೂಡುಬಿದಿರೆ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಶೇ.100 ಫಲಿತಾಂಶ ದಾಖಲಿಸುವ ಜೊತೆಗೆ 190 ವಿದ್ಯಾರ್ಥಿಗಳು 600ಕ್ಕೆ 600 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ಗಮನ ಸೆಳೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.DrMohnAlva1600ಕ್ಕೆ 600 ಅಂಕಗಳನ್ನು ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯ 445 ವಿದ್ಯಾರ್ಥಿಗಳ ಪೈಕಿ ಆಳ್ವಾಸ್ 190 ವಿದ್ಯಾರ್ಥಿ ಸಾಧಕರೊಂದಿಗೆ ಸಿಂಹಪಾಲು ತನ್ನದಾಗಿಸಿಕೊಂಡಿದೆ. ಪರೀಕ್ಷೆಗೆ 2510 ವಿದ್ಯಾರ್ಥಿಗಳ ಪೈಕಿ 1637 ಮಂದಿ ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವುದು ಗಮನಾರ್ಹವಾಗಿದೆ. ಪಿಯುಸಿಯಲ್ಲಿ ವಿಷಯವಾರು 3016 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಗಳಿಸಿದ್ದಾರೆ.

ಈ ಪೈಕಿ ಗಣಿತದಲ್ಲಿ 542 ಇಂಗ್ಲಿಷ್‌ನಲ್ಲಿ 514 ಮಂದಿ ವಿದ್ಯಾರ್ಥಿಗಳು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ ಎಂದು ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ. ಆಳ್ವಾಸ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪ್ರೊ.ಸದಾಕತ್, ವಿಭಾಗಗಳ ಮುಖ್ಯಸ್ಥರುಗಳಾದ ಚಂದ್ರಶೇಖರ್ , ವೆಂಕಟೇಶ್ ನಾವಡ, ಜಾನ್ಸಿ ,ವಿದ್ಯಾ, ಪ್ರಶಾಂತ್, ವೇಣುಗೋಪಾಲ ಶೆಟ್ಟಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *