ಮಂಗಳೂರು: ಪಕ್ಷದ ಸಂಘಟನೆಗಾಗಿ ಅ.28ರಂದು ಮಂಗಳವಾರ ಸದಸ್ಯತ್ವ ನೋಂದಣಿಕಾರ್ಯ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಒಂದು ದಿನ ಬೆಳಗ್ಗಿ ನಿಂದ ಸಂಜೆಯವರೆಗೆ ಸದಸ್ಯತ್ವ ನೋಂದಣಿ ಕಾರ್ಯದಲ್ಲಿ ತೊಡಗಿಸಿ ಕೊಳ್ಳಲಿದ್ದಾರೆ ಏಕದಿನ ಸದಸ್ಯತ್ವ ನೋಂದಣಿ ಅಭಿಯಾನ ಕೈ ಗೊಂಡಿರುವುದು ರಾಜ್ಯದಲ್ಲಯೇ ಪ್ರಥಮ ಪ್ರಯೋಗ.ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿವಿಧ ಮತಗಟ್ಟೆಯ ವ್ಯಾಪ್ತಿಯಲ್ಲಿ ನಾನು ಸೇರಿದಂತೆ ಪಕ್ಷದ ಮುಖಂಡರು ಕಾರ್ಯನಿರ್ವಹಿಸಲಿದ್ದಾರೆ ಎಂದು ರಮಾನಾಥ ರೈ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ಸ್ಥಳ ಗುರುತಿಸಲಾಗಿದೆ. ಸಾರ್ವಜನಿಕ ಬದುಕಿನಲ್ಲಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆ ಮುಖ್ಯ ಎನ್ನುವ ಧ್ಯೇಯದೊಂದಿಗೆ ರಾಜಕೀಯ ಬದುಕಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಕಾಂಗ್ರೆಸ್ ಶಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ.ನಾನು ಹಲವು ಬಾರಿ ಸಚಿವನಾಗಿ,ಶಾಸಕನಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ನನಗೆ ಈ ಪ್ರಶ್ನೆ ಎದುರಾಗಲಿಲ್ಲ ,ನಮ್ಮ ಆದಾಯ ಎಷ್ಟು ಇತ್ತು ,ಈಗ ಎಷ್ಟಿದೆ ಎನ್ನುವುದು ಜಿಲ್ಲೆಯ ಜನರಿಗೆ ಗೊತ್ತಿದೆ. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಭಾರ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ,ಕಾಂಗ್ರೆಸ್ ಪದಾಧಿಕಾರಿಗಳಾದ ಬದ್ರುದ್ದೀನ್,ಕೃಪಾ ಆಳ್ವಾ,ಮಿಥುನ್ ರೈ,ವಿಶ್ವಾಸ್ ದಾಸ್,ಕವಿತಾ ,ಸಂತೋಷ್ ಶೆಟ್ಟಿ,ನಾಗೇಂದ್ರ,ನಝೀರ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು.
