ಬಂಟ್ವಾಳ:ಇಲ್ಲಿನ ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ವತಿಯಿಂದ ಬುಧವಾರ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ಥಳೀಯ ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ಇವರನ್ನು ಸನ್ಮಾನಿಸಿ ಗೌರವಿಸಿದರು.

28btl-Siddakatte
ರೋಟರಿ ಕ್ಲಬ್ಬಿನ ಅಧ್ಯಕ್ಷ ಮೈಕೆಲ್ ಡಿಕೋಸ್ತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣೇಶ ಶೆಟ್ಟಿ, ಶಿಕ್ಷಕ ರಾಜೇಶ ನೆಲ್ಯಾಡಿ ಶುಭ ಹಾರೈಸಿದರು. ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ ಮತ್ತಿತರರು ಇದ್ದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ರಾಯಿ ಸ್ವಾಗತಿಸಿ, ವಂದಿಸಿದರು.

By Suddi9

Leave a Reply

Your email address will not be published. Required fields are marked *