ಬಂಟ್ವಾಳ:ಇಲ್ಲಿನ ಪಾಣೆಮಂಗಳೂರು ನೇತ್ರಾವತಿ ಹೊಸ ಸೇತುವೆ ಮೇಲೆ ಬೆಂಗಳೂರು ಮೂಲದ ಯುವಕನೊಬ್ಬ ಚಾಲನೆ ಸ್ಥಿತಿಯಲ್ಲಿ ಬೈಕು ನಿಲ್ಲಿಸಿ ಬಳಿಕ ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ದಾಸರಹಳ್ಳಿ ನಿವಾಸಿ ಸತ್ಯವೇಲು(೨೯) ಎಂಬಾತ ನಾಪತ್ತೆಯಾದ ಯವಕನಾಗಿದ್ದು, ಈತನ ಬೈಕನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡು ಆತನಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.ಕಳೆದ ಎರಡು ವಾರಗಳ ಹಿಂದೆಯೂ ಬಂದಿದ್ದ ಈತನು ಅಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಸ್ಥಳೀಯರು ರಕ್ಷಿಸಿದ್ದರು.

By Suddi9

Leave a Reply

Your email address will not be published. Required fields are marked *