ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ರೋಟರಿ ಕ್ಲಬ್ ವತಿಯಿಂದ ಬೊಳ್ಳಾರಿ ಅಂಗನವಾಡಿ ಕೇಂದ್ರದಲ್ಲಿ ಗುರುವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ದಲ್ಲಿ ೪೫ ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡರು. ಕ್ಲಬ್ಬಿನ ಅಧ್ಯಕ್ಷ ಮಹಮ್ಮದ್ ವಳವೂರು, ಮಾಜಿ ಸಹಾಯಕ ಗವರ್ನರ್ ರಿತೇಶ್ ಬಾಳಿಗ, ಕಾರ್ಯದರ್ಶಿ ಧನಂಜಯ ಬಾಳಿಗ, ಸದಸ್ಯ ಗಣೇಶ್ ಸಾಲ್ಯಾನ್ ಮತ್ತಿತರರು ಇದ್ದರು.
