ಬೆಂಗಳೂರು :ಶಿಸ್ತು ಪಾಲನೆಗೆ ಹೊಸ ಮಾರ್ಗಸೂಚಿ ಹೊರಡಿಸಿದ ಪೊಲೀಸ್ ಮಹಾನಿರ್ದೇಶಕ ಠಾಣೆಗಳಲ್ಲಿ ಹುಟ್ಟು ಹಬ್ಬ, ವಾರ್ಷಿಕೋತ್ಸವಗಳ ಆಚರಣೆ ಕಂಡು ಬಂದ ಹಿನ್ನೆಲೆಯಲ್ಲಿ ಖಾಸಗಿ ವ್ಯಕ್ತಿಗಳ ಜೊತೆಗೂಡಿ ಸಮಾರಂಭಗಳಲ್ಲಿ ಪೊಲೀಸರು ಭಾಗವಹಿಸುವುದು.ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಕಾರ್ಯಕ್ರಮದಲ್ಲಿ ಭಾಗಿಯಾಗುವ ಬಗ್ಗೆ ಗರಂ ಆಗಿರುವ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್  ಈ ನಿರ್ಧಾರ ಮಾಡಿದ್ದಾರೆ. fghfghfghghjghjgkರೌಡಿಶೀಟರ್, ಸಮಾಜ ಘಾತುಕ ವ್ಯಕ್ತಿಗಳು, ಅಪರಾಧ ಹಿನ್ನೆಲೆಯುಳ್ಳವರ ಜೊತೆ ಅಧಿಕಾರಿ ಮತ್ತು ಸಿಬ್ಬಂದಿ ಯಾವುದೇ ರೀತಿಯ ಸಂಬಂಧ ಹೊಂದಿರುವಂತಿಲ್ಲ. ಪೊಲೀಸ್ ಠಾಣೆ, ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿ, ಎಸಿಪಿ ಕಚೇರಿಗಳಲ್ಲಿ ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವ ಸೇರಿ ಖಾಸಗಿ ಕಾರ್ಯಕ್ರಮ ಆಚರಣೆ ಮಾಡುವಂತಿಲ್ಲ. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸೂಕ್ತವಲ್ಲ. ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೊದಲು ಆಯೋಜಿಸಿದ ವ್ಯಕ್ತಿ ಮತ್ತು ಸಂಘ ಸಂಸ್ಥೆಗಳ ಪೂರ್ವಾಪರ ತಿಳಿದುಕೊಳ್ಳಬೇಕು ಎಂದು ಆದೇಶ ನೀಡಿದ್ದಾರೆ.

By suddi9

Leave a Reply

Your email address will not be published. Required fields are marked *