ಬಂಟ್ವಾಳ:ಇಲ್ಲಿನ ಸಜಿಪಮುನ್ನೂರು ಗ್ರಾಮದ ಆಲಾಡಿ ನಿವಾಸಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕಿರಣ್ ಕುಮಾರ್ (೪೪) ಇವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ನಿಧನರಾದರು.

ಮೃತರಿಗೆ ಪತ್ನಿ, ಮೂವರು ಪುತ್ರರು ಇದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದರು. ಮೃತರಿಗೆ ಮಾಜಿ ಸಚಿವ ಬಿ.ರಮಾನಾಥ ರೈ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಯೂಸುಫ್ ಕರಂದಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.
