ಕೈಕಂಬ: ಸೋಲೂರಿನ ಶ್ರೀ ರೇಣುಕಾ ಪೀಠ ಮತ್ತು ಶ್ರೀ ನಾರಾಯಣ ಗುರು ಮಠದ ನೂತನ ಪೀಠಾಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ಬಲ್ಯೊಟ್ಟು ಮಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರನ್ನು ಕುಪ್ಪೆಪದವು ಶ್ರೀ ದುರ್ಗೇಶ್ವರಿ ದೇವಿ ದೇವಸ್ಥಾನದ ವತಿಯಿಂದ ಸೋಮವಾರ ದೇವಸ್ಥಾನದಲ್ಲಿ ಶಾಲು ಹೊದೆಸಿ ಫಲಪುಷ್ಪ ತಾಂಬೂಲ ನೀಡಿ ಅಭಿನಂದಿಸಿ ಗೌರವಿಸಲಾಯಿತು.
ದೇವಸ್ಥಾನದ ಆಡಳಿತ ಟ್ರಸ್ಟಿ ಪ್ರವೀಣ್ ಕುಮಾರ್ ಜೈನ್ ಅಗರಿ, ಕೋಶಾಧಿಕಾರಿ ಪುರುಷೋತ್ತಮ್ ಕೆ., ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಅಜಿತ್ ಕುಮಾರ್ ಜೈನ್, ಉಪಾಧ್ಯಕ್ಷ ರಾಮಚಂದ್ರ ಸಾಲಿಯಾನ್, ಸಮಿತಿಯ ಪದಾಧಿಕಾರಿಗಳು, ಸದಸ್ಯರುಗಳು, ದುರ್ಗೇಶ್ವರಿ ಸೇವಾ ಸಮಿತಿಯ ಅಧ್ಯಕ್ಷ ಜಗದೀಶ್ ಕುಲಾಲ್ ಪಾಕಜೆ, ಸಮಿತಿಯ ಪದಾಧಿಕಾರಿಗಳು, ಸದಸ್ಯರುಗಳು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.
