ಮಂಗಳೂರು : ಮೈಸೂರಿನಲ್ಲಿ ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಶನ್-ವಾಕೋ ಕರ್ನಾಟಕ ಆಯೋಜಿಸಿದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಮಾರ್ಷಲ್ ಆರ್ಟ್ಸ್ ನ ವಿದ್ಯಾರ್ಥಿಗಳಾದ ಪ್ರಜ್ಣಾ, ಹೈಮಾನ್,ಕಾರ್ತಿಕ್, ರಾಜೀಶ್ ಮತ್ತು ಜೇನಿಶ್ ಇವರುಗಳು ದಕ್ಷಿಣ ಕನ್ನಡ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ಸಂಸ್ಥೆಯನ್ನು ಪ್ರತಿನಿಧಿಸಿ 7 ಚಿನ್ನದ ಪದಕ, 1 ಬೆಳ್ಳಿಯ ಪದಕ ಮತ್ತು 1 ಕಂಚಿನ ಪದಕಗಳನ್ನು ಪಡೆದುಕೊಂಡಿದ್ಧಾರೆ. ಪ್ರಥಮ ಸ್ಥಾನ ಪಡೆದ ವಿಜೇತರು ಗೋವಾದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

WhatsApp Image 2021-08-14 at 12.14.00 PMರಾಜ್ಯಮಟ್ಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ 3ನೇ ಸಮಗ್ರ ತಂಡ ಪ್ರಶಸ್ತಿ ಲಭಿಸಿದೆ, ಇವರು‌ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಮಾರ್ಷಲ್ ಆರ್ಟ್ಸ್ ಸಂಸ್ಥೆಯಲ್ಲಿ ಮಂಗಳೂರು, ಸುರತ್ಕಲ್, ಕಾವೂರು ಇಲ್ಲಿಯ ಸದಸ್ಯರಾಗಿರುತ್ತಾರೆ. ಮುಖ್ಯ ಶಿಕ್ಷಕರಾದ ನಿತಿನ್ ಎನ್ ಸುವರ್ಣ ಮತ್ತು ಸಂಪತ್ ಕುಮಾರ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

By suddi9

Leave a Reply

Your email address will not be published. Required fields are marked *