ಕೈಕಂಬ: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಗುರುಪುರ ಕುಕ್ಕುದಕಟ್ಟೆಯಲ್ಲಿ ಶ್ರೀ ವೈದ್ಯನಾಥ ಕ್ರಿಕೆಟರ್ಸ್ ವತಿಯಿಂದ ೨೫ನೇ ವರ್ಷದ ಸ್ವಾತಂತ್ರೋತ್ಸವ ಆಚರಿಸಲಾಯಿತು. ನಿವೃತ್ತ ಪೊಲೀಸ್ ಜಿ ಕೆ ನರಸಿಂಹ ಪೂಜಾರಿ ಹಾಗೂ ಕಾಂಗ್ರೆಸ್ ಮುಖಂಡ ಯಶವಂತ ಆಳ್ವ ಧ್ವಜಾರೋಹಣ ಮಾಡಿದರು. ಕ್ರಿಕೆಟರ್ಸ್ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

