ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದಾರಿ ಪಕ್ಕದ ಸೇತುವೆಯಿಂದ ಯುವಕನೊಬ್ಬ ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಮುಂಜಾನೆ 10 ಗಂಟೆಗೆ ಸಂಭವಿಸಿದೆ.
ಯುವಕನೊಬ್ಬ ಸೇತುವೆಯ ತಡೆಗೋಡೆಯ ಮೇಲಿನಿಂದ ಕೆಳಕ್ಕೆ ಹಾರಿದ್ದನ್ನು ವಾಹನ ಸವಾರರು ಗಮನಿದ್ದಾರೆ. ಕೂಡಲೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಸೇತುವೆಯಿಂದ ಕೆಳಕ್ಕಿಳಿದು ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಕೆಲವು ಹೊತ್ತಿನ ಬಳಿಕ ಯುವಕನ ಮೃತದೇಹ ಪತ್ತೆಯಾಗಿದೆ.
4

1

2 (1)

3
ಆತ್ಮಹತ್ಯೆ ಮಾಡಿಕೊಂಡ ಯುವಕನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ತಿಳಿದುಬಂದಿಲ್ಲ. ಮಲ್ಪೆ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಶವಾಗಾರಕ್ಕೆ ಸಾಗಿಸಿದ್ದಾರೆ. ಘಟನೆಯಿಂದಾಗಿ ಕೆಲಹೊತ್ತು ರಸ್ತೆಯಲ್ಲಿ ವಾಹನ ಸಂಚಾರ ವ್ಯತ್ಯಯವುಂಟಾಗಿತ್ತು. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *