ಕಟೀಲು : ಕಟೀಲು ಶ್ರೀ ದರ‍್ಗಾಪರಮೇಶ್ವರಿ ದೇವಸ್ಥಾನಕ್ಕೆ ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಭಾನುವಾರದಂದು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದೇವಳದ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣ ಕಟೀಲು, ಜಿ.ಪಂ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಕಟೀಲು ಕ್ಷೇತ್ರದ ಅರ್ಚಕ ಹರಿ ಆಸ್ರಣ್ಣ, ಬಿಜೆಪಿ ನಾಯಕರಾದ ಈಶ್ವರ ಕಟೀಲು, ಕೇಶವ, ಅಭಿಲಾಶ್ ಶೆಟ್ಟಿ , ಆದರ್ಶ್ ಶೆಟ್ಟಿ ಎಕ್ಕಾರು ಮತ್ತಿತರರು ಉಪಸ್ಥಿತರಿದ್ದರು.
