ಬಂಟ್ವಾಳ:ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಚೇರಿ ಸಿಬ್ಬಂದಿ ನಿಯೋಜನೆ ಸಹಿತ ಆವರಣಗೋಡೆ ನಿರ್ಮಾಣ ಮತ್ತಿತರ ಕಾಮಗಾರಿ ನಡೆಸಲು ಸಹಕರಿಸುವುದಾಗಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ.ಇಲ್ಲಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಸಂಜೆ ನಡೆದ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

31btl-Vamdpadv
ಕಾಲೇಜಿನ ಪ್ರಾಂಶುಪಾಲ ಪ್ರೊ. ಹರಿಪ್ರಸಾದ್ ಬಿ. ಶೆಟ್ಟಿ ಕಾಲೇಜಿನ ಬೆಳವಣಿಗೆ ಮತ್ತು ಮೂಲಭೂತ ಸೌಕರ್ಯ ಕೊರತೆ ಬಗ್ಗೆ ಮಾಹಿತಿ ನೀಡಿದರು.ಸಮಿತಿ ಸದಸ್ಯರಾದ ಸುಲೋಚನಾ ಜಿ.ಕೆ.ಭಟ್, ಪುರುಷೋತ್ತಮ ಶೆಟ್ಟಿ ಬಾರೆಕ್ಕಿನಡೆ, ವಿಜಯ ರೈ ಆಲದಪದವು, ಡಾ. ರಾಮಕೃಷ್ಣ ಕರ‍್ನಾಯ, ವಿನೋದ್ ಪೂಜಾರಿ, ದಿನೇಶ್ ಶೆಟ್ಟಿ ದಂಬೆದಾರು, ಮೋಹನದಾಸ್ ಗಟ್ಟಿ, ವಾಸು ಮುಗೇರ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *