ಮೂಡುಬಿದರೆ: ಪ್ರಾಂತ್ಯ ಗ್ರಾಮದ ವಿಶಾಲ್ ನಗರ ಹುಡ್ಕೋ ಕಾಲನಿ ಬಳಿ ಮಂಗಳವಾರ ಬೆಳಿಗ್ಗೆ ಕಾರು ಡಿಕ್ಕಿ ಹೊಡೆದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮೂವರು ಬಾಲಕಿಯರಿಗೆ ತೀವ್ರ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.
ಸ್ಥಳೀಯ ನಿವಾಸಿಗಳಾದ ನೂರ್ಮೆಹರಾ (14), ಸಹೋದರಿ ಬುನೇಝಾ(13) ಹಾಗೂ ಫೌಝಿಯಾ(14) ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಕಂಬ ಮುರಿದು ಬಿದ್ದಿತ್ತು. ಸ್ಥಳೀಯ ಮದರಸದಿಂದ ಪಾಠ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಬರುತ್ತಿದ್ದ ಈ ಬಾಲಕಿಯರಿಗೆ ಕಾರು ಡಿಕ್ಕಿ ಹೊಡೆದಿದೆ. ಮೂಡುಬಿದರೆ ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ
