ಬಂಟ್ವಾಳ: ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ರಚಿಸಿದ ನೂತನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಸ್ಥಳೀಯ ಉದ್ಯಮಿ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ ಆಯ್ಕೆಯಾಗಿದ್ದಾರೆ.21btl-Durgadas Shetty Karenkijeಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಅಧ್ಯಕ್ಷತೆಯಲ್ಲಿ ಭಾನುವಾರ ದೇವಳದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಉಪಾಧ್ಯಕ್ಷರಾಗಿ ವಸಂತ ಕುಮಾರ್ ಅಣ್ಣಳಿಕೆ, ಜಗದೀಶ ಕೊಯಿಲ, ರಶ್ಮಿತ್ ಶೆಟ್ಟಿ ಕೈತ್ರೋಡಿ, ಸಂತೋಷ್ ಚೌಟ ಮಡಂದೂರು, ದೇವಪ್ಪ ಕುಲಾಲ್ ಪಂಜಿಕಲ್ಲು, ಪ್ರಭಾಕರ ಪ್ರಭು ಕರ್ಪೆ, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ ಸುವರ್ಣ, ಕಾರ್ಯದರ್ಶಿಯಾಗಿ ಮೋಹನ್ ಕೆ.ಶ್ರೀಯಾನ್, ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಕೋಶಾಧಿಕಾರಿಯಾಗಿ ರವೀಂದ್ರ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ರಾಜ್ ಹೊಳ್ಳ, ಸಂತೋಷ್ ಕುಮಾರ್ ಬೆಟ್ಟು ಆಯ್ಕೆಗೊಂಡಿದ್ದಾರೆ. ಇದೇ ವೇಳೆ ೨೫ ಮಂದಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೇಮಕಗೊಂಡರು. ಕ್ಷೇತ್ರದ ತಂತ್ರಿ ಶ್ರೀಪಾದ ಪಾಂಗಣ್ಣಾಯ, ಪ್ರಧಾನ ಅರ್ಚಕ ಸುಂದರ ಹೊಳ್ಳ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *