ಬಂಟ್ವಾಳ: ಕ್ಷೇತ್ರ ಬಿಜೆಪಿ ವತಿಯಿಂದ ಪ್ರಧಾನಿ ಮೋದೀಜಿ ಅವರ ೭೧ನೇ ಜನ್ಮ ದಿನಾಚರಣೆ ಪ್ರಯುಕ್ತ ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಭಾನುವಾರ ದಿನವಿಡೀ ನಡೆದ ಭಜನಾ ಸಂಕೀರ್ತನೆ ಕಾರ್ಯಕ್ರಮಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು.
ಕ್ಷೇತ್ರ ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ೭೧ ನೇ ಜನ್ಮ ದಿನಾಚರಣೆ ಪ್ರಯುಕ್ತ ಬಿ.ಸಿ.ರೋಡು ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಭಜನಾ ಸಂಕೀರ್ತನೆ ಕಾರ್ಯಕ್ರಮ ಭಾನುವಾರ ನಡೆಯಿತು. ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಕ್ಷೇತ್ರದ ೮ ಮಹಾಶಕ್ತಿ ಕೇಂದ್ರ ಗಳ ಆಯ್ದ ಭಜನಾ ತಂಡಗಳು ಭಜನಾ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಅವರು ತಿಳಿಸಿದರು. ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ ಬಿ. ಅರಳ, ಕಾರ್ಯದರ್ಶಿ ರಮಾನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಸೀತಾರಾಮ ಪೂಜಾರಿ, ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ಪ್ತದೀಪ್ ಅಜ್ಜಿಬೆಟ್ಟು, ಬಿಜೆಪಿ ಕೋಶಾಧಿಕಾರಿ ಪ್ರಕಾಶ್ ಅಂಚನ್, ಪ್ರಮುಖರಾದ ಗೋಪಾಲ ಸುವರ್ಣ, ಜನಾರ್ದನ ಬೊಂಡಾಲ, ವೆಂಕಟೇಶ ನಾವಡ ಪೊಳಲಿ, ಉಮೇಶ್ ಡಿ.ಎಂ.ಅರಳ , ಮನೋಜ್ ಕಳ್ಳಿಗೆ ಮತ್ತಿತರರು ಇದ್ದರು.
