ಉಜಿರೆ: ಧರ್ಮಕ್ಕೆ ಶಿಸ್ತಿನ ಆವರಣ ಬೇಕು. ಶಿಸ್ತು ಪ್ರಧಾನವಾದ ಹಿಂದೂಧರ್ಮದಲ್ಲಿ ಬದ್ಧತೆ, ಸಂಯಮ ಮತ್ತು ಸ್ವಚ್ಛತೆಗೆ ಆದ್ಯತೆ ಇದೆ. ಎಲ್ಲಾ ಪವಿತ್ರ ತೀರ್ಥಕ್ಷೇತ್ರಗಳಲ್ಲಿ ಶ್ರದ್ಧಾ-ಭಕ್ತಿಯೊಂದಿಗೆ ಭಕ್ತಾದಿಗಳು ಸಂಯಮದಿಂದ ಹಾಗೂ ಶಿಸ್ತಿನಿಂದ ವರ್ತಿಸಿ ಪಾವಿತ್ರ್ಯ ಕಾಪಾಡಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.932A7209 copyಅವರು ಭಾನುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾ ಭವನದಲ್ಲಿ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜದ ರಾಜ್ಯಕಾರ್ಯಕಾರಿ ಸಮಿತಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.932A7231ನಂಬಿಕೆ ಮತ್ತು ಸಂಪ್ರದಾಯದ ಹೆಸರಿನಲ್ಲಿ ಅಂಧಾನುಕರಣೆ ಸಲ್ಲದು. ತೀರ್ಥಕ್ಷೇತ್ರಗಳಲ್ಲಿ ಎಲ್ಲರೂ ಶಿಸ್ತಿನಿಂದ ವರ್ತಿಸಿ, ಸ್ವಚ್ಛತೆ ಕಾಪಾಡಬೇಕು. ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯಲ್ಲಿ ಭಕ್ತರು ಸ್ನಾನ ಮಾಡಿ ಬಟ್ಟೆ, ಸಾಬೂನು, ಪ್ಲಾಸ್ಟಿಕ್ ಮೊದಲಾದ ತ್ಯಾಜ್ಯಗಳನ್ನು ನದಿ ನೀರಿಗೆ ಹಾಕಿ ಕಲುಷಿತ ಮಾಡುತ್ತಿರುವ ಬಗ್ಯೆ ಅವರು ತೀವ್ರ ಅಸಮಾಧಾನ ಮತ್ತು ಆತಂಕ ವ್ಯಕ್ತಪಡಿಸಿದರು. ಸಾಕಷ್ಟು ಸಿಬ್ಬಂದಿ ಹಾಗೂ ಸೂಚನಾ ಫಲಕಗಳೊಂದಿಗೆ ಮುಂಜಾಗರೂಕತೆ ವಹಿಸಿದರೂ ಸಂಪ್ರದಾಯ ಮತ್ತು ಅಂಧಾನುಕರಣೆ ನೆಪದಲ್ಲಿ ನದಿ ನೀರು ಮಲಿನವಾಗುತ್ತಿದೆ. ಅಯ್ಯಪ್ಪ ಭಕ್ತರೆಲ್ಲ ಧರ್ಮಸ್ಥಳದಲ್ಲಿ ದೇವರದರ್ಶನ ಪಡೆದು ಶಬರಿ ಮಲೆಗೆ ಹೋಗುತ್ತಾರೆ. ಅವರತೀರ್ಥಯಾತ್ರೆಯ ಶಿಸ್ತು, ಸಂಯಮ ಮತ್ತು ಬದ್ಧತೆಯನ್ನು ಶ್ಲಾಘಿಸಿದರು.932A7315ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ವರ್ಷದಲ್ಲಿಎರಡು ಬಾರಿ, ಅಗೋಸ್ತು ೧೫ ಮತ್ತು ಮಕರ ಸಂಕ್ರಾಂತಿಯ ದಿನ ಏಪ್ರಿಲ್ ೧೪ರಂದು ರಾಜ್ಯದ ಚರ್ಚ್, ಮಸೀದಿ, ಬಸದಿ ಹಾಗೂ ದೇವಸ್ಥಾನಗಳು ಸೇರಿದಂತೆ ಎಲ್ಲಾ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ಅಯ್ಯಪ್ಪ ಸೇವಾ ಸಮಾಜದಎಲ್ಲಾ ಸದಸ್ಯರುಕೂಡಾತೀರ್ಥ ಕ್ಷೇತ್ರಗಳಲ್ಲಿ ಶಿಸ್ತು, ಸಂಯಮ, ಸ್ವಚ್ಛತೆಯೊಂದಿಗೆ ಪಾವಿತ್ರ್ಯವನ್ನುಕಾಪಾಡಿ ತೀರ್ಥಕ್ಷೇತ್ರಗಳ ರಕ್ಷಣೆ ಮಾಡಬೇಕುಎಂದು ಸಲಹೆ ನೀಡಿದರು.

ತೀರ್ಥಕ್ಷೇತ್ರಗಳು ಪ್ರವಾಸೋದ್ಯಮ ಕೇಂದ್ರಗಳಾಗಬಾರದು.ಪ್ರವಾಸಿ ತಾಣ್ರಗಳಾದರೆ ಪಂಚ ತಾರಾ ಹೋಟೆಲ್‌ಗಳು, ಚಲನಚಿತ್ರ ಮಂದಿರ, ಬಾರ್‌ಗಳು, ಉದ್ಯಮಗಳು ಹಾಗೂ ಆಧುನಿಕ ಸವಲತ್ತುಗಳು ಹೆಚ್ಚಾಗಿ ಕ್ಷೇತ್ರದ ಪಾವಿತ್ರö್ಯಕ್ಕೆ ಹಾನಿಯಾಗುತ್ತದೆ ಎಂದು ಹೇಳಿದರು. ಶುಭಾಶಂಸನೆ ಮಾಡಿದ ಶಾಸಕ ಹರೀಶ್ ಪೂಂಜ ಧರ್ಮಸ್ಥಳಕ್ಕೂ, ಶಬರಿಮಲೆಯಅಯ್ಯಪ್ಪ ಭಕ್ತರಿಗೂ ಅವಿನಾಭಾವ ಸಂಬಂಧವಿದ್ದು ಪ್ರತಿವರ್ಷ ಎಲ್ಲಾ ಅಯ್ಯಪ್ಪ ಭಕ್ತರೂ ಧರ್ಮಸ್ಥಳದ ಮೂಲಕವೇ ಶಬರಿಮಲೆಗೆಯಾತ್ರೆ ಮಾಡುತ್ತಾರೆ. ತಾನು ಕೂಡಾ ಅಜ್ಜನಿಂದ ಪ್ರೇರಣೆ ಪಡೆದು ಈಗಾಗಲೆ ಎಂಟು ಬಾರಿ ಶಬರಿ ಮಲೆ ಯಾತ್ರೆ ಮಾಡಿರುವುದಾಗಿಅವರು ತಿಳಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶಬರಿಮಲೆಅಯ್ಯಪ್ಪ ಸೇವಾ ಸಮಾಜದ ರಾಷ್ಟ್ರೀಯ ಸಮಿತಿಯ ಮಹಾಪೋಷಕರಾಗಿರುವುದಕ್ಕೆ ಹರೀಶ್ ಪೂಂಜಅವರನ್ನುಅಭಿನಂದಿಸಿದರು.  ಕರ್ನಾಟಕದ ೨೩ ಜಿಲ್ಲೆಗಳಲ್ಲಿ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜದ ಸಮಿತಿಗಳು ಕಾರ್ಯನಿರ್ವಹಿಸುತ್ತಿವೆ. ರಾಷ್ಟ್ರೀಯ ಸಮಿತಿಯಅಧ್ಯಕ್ಷ ಟಿ.ಬಿ. ಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ ಸಮಿತಿಯ ವತಿಯಿಂದ ಶಬರಿಮಲೆಯಲ್ಲಿ ಅನ್ನದಾನ, ಪ್ಲಾಸ್ಟಿಕ್ ನಿರ್ಮೂಲನೆ, ಪಾವಿತ್ರ್ಯ ರಕ್ಷಣೆ, ಮಹಿಳೆಯರಿಗೆ ದೇವರದರ್ಶನಕ್ಕೆ ಅವಕಾಶ ಮೊದಲಾದ ಕಾರ್ಯಗಳನ್ನು ಮಾಡಲಾಗಿದೆಎಂದರು.

ಸಂಯೋಜಕ ಪಿ.ಎಸ್. ಪ್ರಕಾಶ್, ವಿ.ಕೃಷ್ಣಪ್ಪ, ಕೋಶಾಧಿಕಾರಿ ವಿನೋದ್ ಮತ್ತು ಸಂಘಟನಾ ಕಾರ್ಯದರ್ಶಿ ತಮಿಳುನಾಡಿನ ದೊರೈ ಶಂಕರ್ ಜಿ ಉಪಸ್ಥಿತರಿದ್ದರು. ದಕ್ಷಿಣಕನ್ನಡಜಿಲ್ಲಾಘಟಕದಕೋಶಾಧಿಕಾರಿ ಮಂಗಳೂರಿನ ಆನಂದ ಶೆಟ್ಟಿ ಸ್ವಾಗತಿಸಿದರು. ಉಡುಪಿ ಜಿಲ್ಲಾಘಟಕದಅಧ್ಯಕ್ಷರಾದರಾಧಾಕೃಷ್ಣ ಮೆಂಡನ್‌ಧನ್ಯವಾದವಿತ್ತರು. ರಾಜ್ಯ ಪ್ರಧಾನ ಕಾರ್ಯದರ್ಶಿ ಕೃಷ್ಣಯ್ಯಕಾರ್ಯಕ್ರಮ ನಿರ್ವಹಿಸಿದರು.

ಶಬರಿಮಲೆಅಯ್ಯಪ್ಪ ಸೇವಾ ಸಮಾಜದಸದಸ್ಯರು ಶನಿವಾರ ಸಂಜೆ ನೇತ್ರಾವತಿ ನದಿಯಲ್ಲಿ ಸ್ವಚ್ಛತಾಅಭಿಯಾನ ನಡೆಸಿದರು. ಭಾನುವಾರ ಧರ್ಮಸ್ಥಳದಲ್ಲಿ  ದೇವಸ್ಥಾನದ ವಠಾರ ಹಾಗೂ ರತ್ನಗಿರಿಯಲ್ಲಿ (ಬಾಹುಬಲಿ ಬೆಟ್ಟ) ಸ್ವಚ್ಛತೆಕಾರ್ಯ ನಡೆಸಿದರು.

By suddi9

Leave a Reply

Your email address will not be published. Required fields are marked *