ಮೂಡುಬಿದಿರೆ: ತೋಡಾರು ಇಂಜಿನಿಯರಿಂಗ್ ಕಾಲೇಜಿನ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದ್ದು, ವಿದ್ಯಾರ್ಥಿಗಳಾದ ಸಾಝ್ ಮತ್ತು ಸ್ವರೂಭ್ ಗಾಯಗೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಂಪ್ರದಾಯ ದಿನದ ಕಾರ್ಯಕ್ರಮಕ್ಕೆ ಸಂಬಂಧಪಟ್ಟಂತೆ ಎರಡು ತಂಡಗಳ ನಡುವೆ ಜಗಳ ನಡೆದಿದ್ದು, ಈ ವೇಳೆ ವಿದ್ಯಾರ್ಥಿಗಳು ಹೊಡೆದಾಟ ನಡೆಸಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಎರಡೂ ತಂಡಗಳ ಎಂಟು ಮಂದಿ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಪೊಲೀಸರು ಆಸ್ಪತ್ರೆ ತೆರಳಿ ಗಾಯಾಳುಗಳಿಂದ ಮಾಹಿತಿ ಪಡೆದಿದ್ದಾರೆ.

By suddi9

Leave a Reply

Your email address will not be published. Required fields are marked *