ವಿಟ್ಲ: ವಿಠಲ ಪ್ರೌಢ ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಲಯನ್ಸ್ ಜಿಲ್ಲಾ ಮಾಜಿ ಪ್ರಾಂತೀಯ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಧ್ವಜಾರೋಹನ ನೆರವೇರಿಸಿದರು.
ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬಗರಹ್ಮಾವರ್, ವಿಠಲ ವಿದ್ಯಾ ಸಂಘದ ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯ ನಿತ್ಯಾನಂದ ನಾಯಕ್, ವಿಟ್ಲ ಲಯನ್ಸ್ ಕ್ಲಬ್ ಕಾರ್ಯದರ್ಶಿ ಲೂವಿಸ್ ಮಸ್ಕರೇನಸ್, ಸಹ ಅಧ್ಯಾಪಕರು ಮತ್ತು ಮಕ್ಕಳು ಭಾಗವಹಿಸಿದ್ದರು.

