ನವದೆಹಲಿ: ಅಂತಾರಾಷ್ಟ್ರೀಯ ಕಚ್ಛಾತೈಲದ ಬೆಲೆಯಲ್ಲಿ ಕುಸಿತ ಕಂಡಿರುವುದರಿಂದ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ 2ರಿಂದ 2.30ರೂ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಪೆಟ್ರೋಲಿಯಂ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಇದು ಶುಕ್ರವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವ ಸಾಧ್ಯತೆ ಇದೆ.
ಒಂದೇ ತಿಂಗಳಿನಲ್ಲಿ ಪೆಟ್ರೋಲ್ ದರ ಕಡಿಮೆಯಾಗುತ್ತಿರುವುದು ಇದು ಎರಡನೇ ಬಾರಿ. ಕಳೆದ ವಾರವಷ್ಟೇ ಕೇಂದ್ರ ಸರ್ಕಾರ ತೈಲ ಬೆಲೆಯನ್ನು 3.37 ರೂಪಾಯಿಯಷ್ಟು ಇಳಿಕೆ ಮಾಡಿತ್ತು. ಇನ್ನು ಜಾರ್ಖಂಡ್, ಜಮ್ಮು-ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ಇರೋದ್ರಿಂದ ಬೆಲೆ ಇಳಿಕೆಯಾಗಲಿದೆ ಎಂದು ವಿಶ್ಲೇಷಕರು ತಿಳಿಸಿದ್ದಾರೆ.

