ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಕರ್ನಾಟಕ ಮಲ್ಲ ದಿನಪತ್ರಿಕೆಯ ಸಂಪಾದಕ ಚಂದ್ರಶೇಖರ ಪಾಲೆತ್ತಡಿ ಇವರನ್ನು ನ.22ರಂದು ಸೋಮವಾರ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸನ್ಮಾನಿಸಿದರು.
ಈ ಸಂಧರ್ಭದಲ್ಲಿ ಜೊತೆ ಕಾರ್ಯದರ್ಶಿ ಸತೀಶ್ ಅಡಪ್ಪ ಸಂಕಬೈಲು, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಶ್ರೀ ಸುಧಾಕರ್ ಪೂಂಜಾ, ಸಾಲೆತ್ತೂರ್ ಬಂಟರ ಸಂಘದ ಅಧ್ಯಕ್ಷರಾದ ದೇವಪ್ಪ ಶೇಖ, ಅಮರೇಶ್ ಶೆಟ್ಟಿ ಸಾಲೆತ್ತೂರು, ಒಕ್ಕೂಟದ ವಿಶೇಷ ಆಹ್ವಾನಿತರಾದ ಜಗನ್ನಾಥ ಶೆಟ್ಟಿ ಬಾಳ ಮತ್ತು ಶ್ರೀ ಹೇಮಂತ್ ಶೆಟ್ಟಿ, ಒಕ್ಕೂಟದ ಮಾಜಿ ಕೋಶಾಧಿಕಾರಿಯಾದ ಕೊಲ್ಲಾಡಿ ಬಾಲಕೃಷ್ಣ ರೈ, ಉದ್ಯಮಿ ಸುರೇಶ್ ಶೆಟ್ಟಿ ಯೆಯ್ಯಾಡಿ, ಶ್ರೀ ರವಿ ಶೆಟ್ಟಿ, ಮಾಧ್ಯಮ ಮಿತ್ರರು, ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಸಿಬ್ಬಂದಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.


