ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಪೇಟೆ ಬಸ್ ನಿಲ್ದಾಣ ಬಳಿ ರಾಷ್ಟ್ರೀಯ ಹೆದ್ದಾರಿ ಇಳಿಜಾರು ರಸ್ತೆ ದುರಸ್ತಿ ಕಾಮಗಾರಿ ಮಂಗಳವಾರ ಆರಂಭಗೊಂಡಿದೆ. ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಪೇಟೆ ಬಸ್ ನಿಲ್ದಾಣ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿ ಇಳಿಜಾರು ರಸ್ತೆಯಿಂದ ಪ್ರಯಾಣಿಕರಿಗೆ ಸಮಸ್ಯೆಯಾಗಿತ್ತು.7btl-B.C.ROAD

ಬಿ.ಸಿ.ರೋಡು ಪೇಟೆ ಬಸ್ ನಿಲ್ದಾಣ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರು ಕಾಲು ಜಾರಿ ಬೀಳುತ್ತಿದ್ದ ಅಪಾಯಕಾರಿ ಇಳಿಜಾರು ರಸ್ತೆ ದುರಸ್ತಿ ಕಾಮಗಾರಿ ಮಂಗಳವಾರ ಆರಂಭಗೊಂಡಿದೆ. ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮತ್ತು ಡಾಂಬರೀಕರಣ ಕಾಮಗಾರಿಯಿಂದಾಗಿ ಹೆದ್ದಾರಿ ಎತ್ತರ ಏರಿಕೆಯಾಗಿತ್ತು.7btl-Bcroad-1

ಇದರಿಂದಾಗಿ ಮಂಗಳೂರು-ಬಿ.ಸಿ.ರೋಡು ಸಹಿತ ಉಪ್ಪಿನಂಗಡಿ ಮತ್ತು ಪುತ್ತೂರು-ಬಿ.ಸಿ.ರೋಡು, ಧರ್ಮಸ್ಥಳ-ಬಿ.ಸಿ.ರೋಡು ಕಡೆಗೆ ಸಂಚರಿಸುವ ಪ್ರಯಾಣಿಕರು ಬಸ್ಸು ಇಳಿಯುವ ವೇಳೆ ಕಾಲು ಜಾರಿ ಬೀಳುತ್ತಿರುವುದು ಸಾಮಾನ್ಯವಾಗಿತ್ತು. ಈಚೆಗಷ್ಟೇ ಮಹಿಳೆಯೊಬ್ಬುರು ಬಿದ್ದು ಗಂಭೀರ ಗಾಯಗೊಂಡು ಬಳಿಕ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಬಗ್ಗೆ ಪ್ರಯಾಣಿಕರು ಮತ್ತು ನಾಗರಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಇವರ ಸೂಚನೆಯಂತೆ ಮೊಗರೋಡಿ ಕನ್ಸ್ಟ್ರ ಕ್ಷನ್ ಸಂಸ್ಥೆ ಇಳಿಜಾರು ರಸ್ತೆ ಅಗೆದು ಎತ್ತರಿಸುವ ಕಾಮಗಾರಿ ಕೈಗೆತ್ತಿಕೊಂಡಿರುವುದು ನಾಗರಿಕರ ಸಂತೋಷಕ್ಕೆ ಕಾರಣವಾಗಿದೆ. ಹೆದ್ದಾರಿ ಪ್ರಾಧಿಕಾರ ಸಹಾಯಕ ಎಂಜಿನಿಯರ್ ಅನಿರುದ್ಧ್, ಸಂಚಾರಿ ಠಾಣೆ ಎಸೈ ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

By Suddi9

Leave a Reply

Your email address will not be published. Required fields are marked *