ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾಭವನ ಟ್ರಸ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಡಿ.19ರಂದು ಭಾನುವಾರ ನಗರದ ನೆಹರೂ ಮೈದಾನದ ಪಕ್ಕದ ಫುಟ್ಬಾಲ್ ಕ್ರೀಡಾಂಗಣದಲ್ಲಿ ಬೆಳಗ್ಗೆ 9:00 ರಿಂದ ಸಂಜೆ 4 ಗಂಟೆಯ ತನಕ ನಡೆಯಲಿದೆ.

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಕ್ರೀಡಾ ಕೂಟವನ್ನು ಉದ್ಘಾಟಿಸಲಿರುವರು.ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಅಕ್ಷಯ್  ಶ್ರೀಧರ್ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಲಿರುವರು. ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ್ ನಾಯಕ್ ಇಂದಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.

ಮುಖ್ಯ ಅತಿಥಿಗಳಾಗಿ  ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ, ಆರ್ ಜಿಯುಎಚ್ ಎಸ್ ನ ಸಿಂಡಿಕೇಟ್ ಸದಸ್ಯ ಡಾ.ಯು.ಟಿ.ಇಫ್ತಿಕಾರ್ ಅಲಿ, ದ.ಕ.ಜಿಲ್ಲಾ ವಾರ್ತಾಧಿಕಾರಿ ರವಿರಾಜ್ ಎಚ್.ಜಿ,  ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆರ್.ರಾಮಕೃಷ್ಣ , ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಆಗಮಿಸಲಿರುವರು.

ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮಂಗಳೂರಿನ ಶಾಸಕ ಯು.ಟಿ.ಖಾದರ್ ಬಹುಮಾನ ವಿತರಿಸುವರು. ಮುಖ್ಯ ಅತಿಥಿಗಳಾಗಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಕೆನರಾ ಬ್ಯಾಂಕ್ ಮಂಗಳೂರು ವೃತ್ತ ಕಚೇರಿಯ ಮಹಾ ಪ್ರಬಂಧಕರಾದ ಯೋಗೀಶ್ ಆಚಾರ್ಯ, ದ.ಕ.ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ನ ಅಧ್ಯಕ್ಷ ಅಮರನಾಥ್ ರೈ ಭಾಗವಹಿಸಲಿರುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

By suddi9

Leave a Reply

Your email address will not be published. Required fields are marked *