ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಶ್ರೀಮಹಾವೀರ ಕಾಲೇಜು ಬಳಿಯ ಕೊಡಂಗಲ್ಲು ಕೀರ್ತಿನಗರ ರಸ್ತೆಬದಿಯಲ್ಲಿ ಕಿಡಿಗೇಡಿಗಳು ಪ್ಲಾಸ್ಟಿಕ್ ಚೀಲದಲ್ಲಿ ದನದ ರುಂಡವನ್ನು ಎಸೆದಿರುವುದು ಬುಧವಾರ ಬೆಳಗ್ಗೆ ಪತ್ತೆಯಾಗಿದೆ.
ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು, ಪೊಲೀಸರು ರುಂಡವನ್ನು ಅಲ್ಲಿಂದ ತೆರವುಗೊಳಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಕಿಡಿಗೇಡಿಗಳನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ತಾಲೂಕು ಘಟಕ ಒತ್ತಾಯಿಸಿದೆ.
