ಬಂಟ್ವಾಳ: ಮಾರ್ನಬೈಲು ಸಮೀಪದ ನಾಗನವಲಚ್ಚಿಲ್ ನಿವಾಸಿ, ಹಿರಿಯ ವೈದ್ಯ ಡಾ.ಎಚ್.ಪಿ.ಸಪಳಿಗ (೮೨) ಇವರು ಹೃದಯಾಘಾತದಿಂದ ಜ.15ರಂದು ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.15btl-Dr.H.P.Sapaliga

ಮೃತರಿಗೆ ಪತ್ನಿ, ಪುತ್ರ ಗ್ರಾಮ ಪಂಚಾಯಿತಿ ಸದಸ್ಯ ಸಂದೀಪ್ ಕುಮಾರ್ ಮತ್ತು ಮೂವರು ಪುತ್ರಿಯರು ಇದ್ದಾರೆ. ಪಾಣೆಮಂಗಳೂರು ಪೇಟೆಯಲ್ಲಿ ಕಳೆದ ೫೦ ವರ್ಷಗಳಿಂದ ಕ್ಲಿನಿಕ್ ಮುನ್ನಡೆಸುತ್ತಿದ್ದರು. ಕಳೆದ ೧೯೭೪ರಿಂದ ಮಾರ್ನಬೈಲು ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ಸಂಸ್ಥಾಪಕರಾಗಿ ೨೮ ವರ್ಷಗಳಿಂದ ಕಟೀಲು ಮೇಳದ ಯಕ್ಷಗಾನ ಬಯಲಾಟ ನಡೆಸುತ್ತಿದ್ದರು.

ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘದಲ್ಲಿ ೨೫ ವರ್ಷ ಸ್ಥಾಪಕ ಕೋಶಾಧಿಕಾರಿಯಾಗಿ, ಸುಮಂಗಲಾ ಕ್ರೆಡಿಟ್ ಸೊಸೈಟಿ ನಿರ್ದೇಶಕರಾಗಿ, ನಂದಾವರ ಕ್ಷೇತ್ರ ಭಕ್ತ ಮಂಡಳಿ ಸದಸ್ಯರಾಗಿ, ಬಂಟ್ವಾಳ ಲಯನ್ಸ್ ಕ್ಲಬ್ ಸದಸ್ಯರಾಗಿ ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.

ಸಂತಾಪ: ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಮತ್ತಿತರರು ಸಂತಾಪ ವ್ಯಕ್ತಪಡಿಸಿದರು.

By suddi9

Leave a Reply

Your email address will not be published. Required fields are marked *