ಕೈಕಂಬ : ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಪಂಚಾಯತ್ ಅಧ್ಯಕ್ಷ ಹರಿಕೇಶ ಶೆಟ್ಟಿ ಅಧ್ಯಕ್ಷತೆಯಲ್ಲಿ ಜ. ೨೫ರಂದು ಕೆಡಿಪಿ ತ್ರೈಮಾಸಿಕ ಸಭೆ ನಡೆಯಿತು.
ಸಭೆಯಲ್ಲಿ ಗ್ರಾಮದಲ್ಲಿ ನಡೆಯಲಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಉಪಾಧ್ಯಕ್ಷೆ ರತ್ನಾ ಎಸ್, ಸದಸ್ಯರು, ಗ್ರಾಮ ಮಟ್ಟದ ಅಧಿಕಾರಿಗಳು ಹಾಜರಾಗಿದ್ದರು.
ಗೈರು ಹಾಜರಾಗಿರುವ ಪಶು ಇಲಾಖೆ, ಕೃಷಿ, ಸಣ್ಣ ನೀರಾವರಿ, ಸಮಾಜ ಕಲ್ಯಾಣ, ಮೀನುಗಾರಿಕೆ, ರೇಷ್ಮೆ ಇಲಾಖೆಗಳ ಅಧಿಕಾರಿಗಳ ಬಗ್ಗೆ ಸದಸ್ಯರು ಹಾಗೂ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದು, ಅಧಿಕಾರಿಗಳಿಗೆ ನೋಟಿಸು ಜಾರಿ ಮಾಡಲು ನಿರ್ಧರಿಸಲಾಯಿತು. ಪಂಚಾಯತ್ ಕಾರ್ಯದರ್ಶಿ ರಾಮಪ್ಪ ಕಾರ್ಯಕ್ರಮ ನಿರೂಪಿಸಿದರು.
