ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಯಾವುದೇ ಜನಪ್ರಿಯ ಘೋಷಣೆ ಇಲ್ಲದ ಮೇಲ್ನೋಟಕ್ಕೆ ನೀರಸವಾಗಿ ಕಾಣುವ ಬಜೆಟ್ ಮಂಡಿಸಿ ಆಶ್ಚರ್ಯ ಮೂಡಿಸಿದ್ದಾರೆ.

ಸಾಧಾರಣಾವಾಗಿ ಕೇಂದ್ರ ಬಜೆಟ್‌ನಲ್ಲಿ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಭರಪೂರ ಯೋಜನೆಗಳನ್ನು ಪ್ರಕಟಿಸುವುದು ಸಾಮಾನ್ಯ. ಕಳೆದ ವರ್ಷದವರೆಗೂ ಈ ಸಂಪ್ರದಾಯ ಪಾಲನೆಯಾಗುತ್ತಿತ್ತು. ಆದರೆ ಈ ಬಾರಿ ಈ ಸಂಪ್ರದಾಯವನ್ನು ಧಿಕ್ಕರಿಸಿ ಭಾರತದ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗಿದೆ ಎಂಬ ಅಭಿಪ್ರಾಯವನ್ನು ಆರ್ಥಿಕ ತಜ್ಞರು, ಉದ್ಯಮಿಗಳು ಹೊರಹಾಕಿದ್ದಾರೆ.
