ಮುಂಬಯಿ : ಲತಾ ಮಂಗೇಶ್ಕರ್ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಲತಾ ಮಂಗೇಶ್ವರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಫೆ.6ರಂದು ಭಾನುವಾರ  ವಿಧಿವಶರಾದರು. vijaya-karnataka

‘ಗಾನ ಕೋಗಿಲೆ’ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ಕೋವಿಡ್ 19 ಹಾಗೂ ನ್ಯೂಮೋನಿಯಾದಿಂದ ಬಳಲುತ್ತಿದ್ದ ಲತಾ ಮಂಗೇಶ್ಕರ್ ಅವರನ್ನು ಕಳೆದ ಜನವರಿ ತಿಂಗಳಿನಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಲತಾ ಮಂಗೇಶ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿ ಎಂದು ಅವರ ಅಸಂಖ್ಯಾತ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದ್ದರು. ಆದರೆ, ಕೊನೆಗೂ ಪ್ರಾರ್ಥನೆ ಫಲಿಸಲೇ ಇಲ್ಲ. ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಗಣ್ಯರು ಹಾಗೂ ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ.

By suddi9

Leave a Reply

Your email address will not be published. Required fields are marked *