ಕೈಕಂಬ : ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನ ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವರುಗಳ ನವೀಕರಣ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಪ್ರಯುಕ್ತ ಫೆ.09ರಂದು ಬುಧವಾರ ಮಹಾಪೂಜೆ, ಪಲ್ಲಪೂಜೆ ಬ್ರಹ್ಮ ಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿ ಹಾಗೂ ವೆಂಕಟೇಶ್ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

ಈ ಸಂಧರ್ಭದಲ್ಲಿ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ. ರಘುನಾಥ ಸೋಮಯಾಜಿ, ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಭಾಸ್ಕರ ಭಟ್, ಭಾಸ್ಕರ ರಾವ್ ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಜೀರ್ಣೋದ್ಧಾರ, ಕಾರ್ಯಾಧ್ಯಕ್ಷ ವಿಷ್ಣು ಮೂರ್ತಿ ಭಟ್, ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆ ಗುತ್ತು, ಪೊಳಲಿ ದೇವಳದ ಅರ್ಚಕ ಪದ್ಮನಾಭ ಭಟ್, ಕರಿಯಂಗಳ ಗ್ರಾಮಪಂಚಾಯತ್ ಅಧ್ಯಕ್ಷ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ, ಪೊಳಲಿ ವೆಂಕಟೇಶ್ ನಾವಡ, ರಮೇಶ್ ರಾವ್, ನರಸಿಂಹ ಮಯ್ಯ ಬಿಸಿ ರೋಡ್, ಸುಬ್ರಾಯ ಕಾರಂತ ಪೊಳಲಿ ಜೀರ್ಣೋದ್ಧಾರ ಸಮಿತಿ, ಸದಸ್ಯರು ಜೀರ್ಣೋದ್ಧಾರ ಸಮಿತಿ, ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

