ಮುಂಬಯಿ : ಶ್ರೀಕೃಷ್ಣಮಠಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಆಗಮಿಸಿದಾಗ ವಾದ್ಯಘೋಷದೊಂದಿಗೆ ಸ್ವಾಗತಿಸಿ, ಶ್ರೀಮಠದ ದಿವಾನ ವರದರಾಜ ಭಟ್ ಹಾಗೂ ಪುರೋಹಿತ ಶ್ರೀನಿವಾಸ ಉಪಾಧ್ಯಾಯರು ಬರಮಾಡಿಕೊಂಡು ದೇವರ ದರ್ಶನ ಮಾಡಿಸಿದರು. ನಂತರ ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. 

ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್ ಮಂಜುನಾಥ್, ಜಿಲ್ಲಾ ನಿರ್ದೇಶಕ ಗಣೇಶ್, ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲ್ಯಾನ್, ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ವಿಷ್ಣು ಪಾಡಿಗಾರ್, ವಾಸುದೇವ ಪೆರಂಪಳ್ಳಿ, ಮುರಳಿ ಕಡೆಕಾರ್, ಗಣೇಶ್ ರಾವ್, ಗಂಗಾಧರ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

