ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪತ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಸಂಸದ ನಳಿನ್ ಕುಮಾರ್, ಸಚಿವ ಎಸ್.ಅಂಗಾರ, ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸೋಮವಾರ ಮಧ್ಯಾಹ್ನ ವೀಕ್ಷಿಸಿದರು.
ಇಲ್ಲಿನ ಬಿ.ಸಿ.ರೋಡ್- ಅಡ್ಡಹೊಳೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಷಟ್ಪಥ ಮೇಲ್ಸೇತುವೆ ಮತ್ತು ಎರಡು ಸೇತುವೆ ನಿರ್ಮಾಣ ಕಾಮಗಾರಿ ೨೦೨೩ರಲ್ಲಿ ಪೂರ್ಣಗೊಳ್ಳಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಇಲ್ಲಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಹೆದ್ದಾರಿ ಇಲಾಖೆ ಅಧಿಕಾರಿಗಳೊಂದಿಗೆ ಸೋಮವಾರ ಸಂಜೆ ವೀಕ್ಷಿಸಿ ಅವರು ಮಾತನಾಡಿದರು. ಬಿ.ಸಿ.ರೋಡು ಸರ್ಕಾರಿ ಬಸ್ ನಿಲ್ದಾಣ ಎದುರು ವೃತ್ತ ರಚನೆ ಬಗ್ಗೆ ಸಚಿವ ಎಸ್.ಅಂಗಾರ ಮತ್ತು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿರಾಡಿ ಘಾಟಿ ಜಿಲ್ಲೆಯ ಜೀವನಾಡಿಯಾಗಿದ್ದು, ಆರು ತಿಂಗಳು ರಸ್ತೆ ಸಂಪೂರ್ಣ ಮುಚ್ಚಿ ಕಾಮಗಾರಿ ನಡೆಸಿದರೆ ಜನತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಬೇಕಾಗಿದೆ ಎಂದರು. ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ, ಪ್ರಮುಖರಾದ ವಜ್ರನಾಥ ಕಲ್ಲಡ್ಕ, ಮೋನಪ್ಪ ದೇವಸ್ಯ, ಯಶೋಧರ ಕರ್ಬೆಟ್ಟು, ದಿನೇಶ್ ಅಮ್ಟೂರು, ಕಮಲಾಕ್ಷಿ ಕೆ. ಪೂಜಾರಿ, ಕೇಶವ ದೈಪಲ, ಅಭಿಷೇಕ್ ಶೆಟ್ಟಿ, ಪುಷ್ಪರಾಜ್ ಚೌಟ, ಚೆನ್ನಪ್ಪ ಕೋಟ್ಯಾನ್, ಯತಿನ್ ಕುಮಾರ್, ಮಾಧವ ಎಸ್.ಮಾವೆ ಸಹಿತ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
