ಮಂಗಳೂರು: ಪ್ರೆಸ್ ಕ್ಲಬ್ (ರಿ.)ಮಂಗಳೂರು, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಮತ್ತು ಪತ್ರಿಕಾ ಭವನ ಟ್ರಸ್ಟ್(ರಿ) ಲೇಡಿಹಿಲ್, ಮಂಗಳೂರು ಇದರ ಪ್ರೆಸ್ ಕ್ಲಬ್ ದಿನಾಚರಣೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ- 2021 ಮತ್ತು ಹಿರಿಯ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಗೌರವ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ತಣ್ಣೀರುಬಾವಿ ಸಮುದ್ರ ಕಿನಾರೆಯಲ್ಲಿರುವ ಟ್ರೀ ಪಾರ್ಕ್ ನಲ್ಲಿ ಮಾ.6 ರಂದು ನಡೆಯಲಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಕೆ.ಸದಾಶಿವ ಶಿಣೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ‌.Untitled-1

ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಸ್.ಯಡಪಡಿತ್ತಾಯ ಅವರು “ಪ್ರೆಸ್ ಕ್ಲಬ್ ಪ್ರಶಸ್ತಿ- 2021” ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಚಲನಚಿತ್ರ ನಟ ನವೀನ್ ಡಿ.ಪಡೀಲ್ ಅವರು ಹೊರೊಯ ಪತ್ರಕರ್ತರಿಗೆ ಗೌರವ ಸನ್ಮಾನ ಮಾಡಲಿದ್ದಾರೆ. ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ವೈ.ದಿನೇಶ್ ಕುಮಾರ್ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್.ಅವರು ಉಪಸ್ಥಿತರಿರುವರು.

ಸಮಾಜ ಸೇವಕ ರವಿ ಕಕ್ಯಪದವು ಅವರು ಈ ಬಾರಿಯ ಪ್ರೆಸ್ ಕ್ಲಬ್ ಪ್ರಶಸ್ತಿ -2022 ಗೆ ಭಾಜನರಾಗಿದ್ದಾರೆ. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತ ರ ಸಂಘದ ಕೋಶಾಧಿಕಾರಿ ವೆಂಕಟೇಶ್ ಬಂಟ್ವಾಳ ಸಹಿತ ಆರುಮಂದಿ‌ ಹಿರಿಯ ಪತ್ರಕರ್ತರು ಗೌರವ ಸನ್ಮಾನ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ‌ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ,ಮನರಂಜನಾ ಕಾರ್ಯಕ್ರಮವು‌ ಜರಗಲಿದೆ.

By suddi9

Leave a Reply

Your email address will not be published. Required fields are marked *