ಬಂಟ್ವಾಳ: ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ಬಳಿ ತನ್ಮಯಿ ಸಂಜೀವಿನಿ ಒಕ್ಕೂಟ ಇದರ ವತಿಯಿಂದ ಸರ್ಕಾರಿ ಪ್ರಾಯೋಜಿತ ‘ಸಂಜೀವಿನಿ ಮಾಸಿಕ ಸಂತೆ’ ಕಾರ್ಯಕ್ರಮ ಮಾ08ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಿತು.

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಹಭಾಗಿತ್ವದಲ್ಲಿ ನಡೆಯುವ ಈ ವಿನೂತನ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಚಾಲನೆ ನೀಡುವರು.

ತಾಲ್ಲೂಕು ಪಂಚಾಯಿತಿ ಇಒ ರಾಜಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಾ, ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಪಿಡಿಒ ಮಧು ಟಿ.ಎಲ್.ತಿಳಿಸಿದ್ದಾರೆ. ಮಹಿಳೆಯರು ಸ್ವಸಹಾಯ ಸಂಘಗಳ ಮೂಲಕ ತಾವೇ ಸ್ವತಃ ಉತ್ಪಾದಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂತಹ ‘ಸಂಜೀವಿನಿ ಮಾಸಿಕ ಸಂತೆ’ ನಡೆಯುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *