ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಸ್ಪರ್ಶ ಸಭಾಂಗಣದಲ್ಲಿ ಪುತ್ತೂರು ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರದ ವತಿಯಿಮದ ಶನಿವಾರ ಸಂಜೆ ನಡೆದ ‘ನೃತ್ಯಧಾರ-೨೦೨೨’ ಕಾರ್ಯಕ್ರಮದಲ್ಲಿ ಹಿರಿಯ ನೃತ್ಯಗುರು ವಿದ್ವಾನ್ ಉಳ್ಳಾಲ ಮೋಹನ್ ಕುಮಾರ್ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. 
ಇಲ್ಲಿನ ಬಿ.ಸಿ.ರೋಡು ಸ್ಪರ್ಶ ಸಭಾಂಗಣದಲ್ಲಿ ಪುತ್ತೂರು ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರದ ವತಿಯಿಮದ ಶನಿವಾರ ಸಂಜೆ ನಡೆದ ‘ನೃತ್ಯಧಾರ-೨೦೨೨’ ಕಾರ್ಯಕ್ರಮದಲ್ಲಿ ಹಿರಿಯ ನೃತ್ಯಗುರು ವಿದ್ವಾನ್ ಉಳ್ಳಾಲ ಮೋಹನ್ ಕುಮಾರ್ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಯಕ್ಷಗಾನ ರಂಗದ ಖ್ಯಾತ ಹಾಸ್ಯಗಾರ ದಿವಂಗತ ನಯನ ಕುಮಾರ್ ಇವರ ಸ್ಮರಣಾರ್ಥ ‘ಕಲಾ ನಯನ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಇದೇ ವೇಳೆ ಪುತ್ತೂರು ಭಾವನ ಕಲಾ ಆಟ್ಸ್ ೯ ಕಲಾವಿ ವಿಘ್ನೇಶ್ ವಿಶ್ವಕರ್ಮ ದಂಪತಿ ಇವರನ್ನು ಸನ್ಮಾನಿಸಲಾಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಪ್ರಶಸ್ತಿ ಪ್ರದಾನ ನೆರವೇರಿಸಿದರು.
ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ಬೂಡ ಅಧ್ಯಕ್ಷ ಬಿ. ದೇವದಾಸ್ ಶೆಟ್ಟಿ, ರಾಜೇಶ್ವರಿ ಉಳ್ಳಾಲ ಇದ್ದರು. ಇದೇ ವೇಳೆ ವಿದುಷಿ ರೋಹಿಣಿ ಉದಯ್ ಇವರಿಂದ ನವಗೃಹ ನೃತ್ಯರೂಪಕ ನಡೆಯಿತು. ಸಂಚಾಲಕ ಉದಯ ವೆಂಕಟೇಶ್ ಭಟ್ ಸ್ವಾಗತಿಸಿ, ವಂದಿಸಿದರು.
