ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಸಮೀಪದ ಕೈಕುಂಜೆ ಪೂರ್ವ ಬಡಾವಣೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕತ್ತಿನಿಂದ ಬೈಕಿನಲ್ಲಿ ಬಂದ ಇಬ್ಬರು ಆಗಂತುಕರು ಮಾಂಗಲ್ಯ ಸರ ಎಗರಿಸಿ ಪರಾರಿಯಾದ ಘಟನೆ ಭಾನುವಾರ ನಡೆದಿದೆ.
ಇಲ್ಲಿನ ನಿವಾಸಿ ಮಹಿಳೆ ಸುಲೋಚನಾ ಎಂಬವರು ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ಟೈಲರ್ ಅಂಗಡಿಗೆ ಹೋಗಿ ಮರಳಿ ಮನೆಗೆ ಬರುತ್ತಿದ್ದ ವೇಳೆ ೨೮ ಗ್ರಾಂ ತೂಕದ ಮಾಂಗಲ್ಯ ಸರ ಸೆಳೆದು ಪರಾರಿಯಾಗಿದ್ದಾರೆ ಎಂದು ಆರೋಪಿಸಿ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
