ಬಂಟ್ವಾಳ: ತಾಲ್ಲೂಕಿನ ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ಗೆ ಮಾ.12ರಂದು ಶನಿವಾರ ತೆರಳಿ ಕೃಷಿ ಪಾಠ ಆಲಿಸಿದರು.
ಕೃಷಿ ಕ್ಷೇತ್ರದಲ್ಲಿ ಕೂಡ ತಂತ್ರಜ್ಞಾನ ಬಳಕೆ ಮತ್ತು ಮಿಶ್ರ ಬೇಸಾಯದಿಂದ ಆದಾಯ ಗಳಿಕೆ ಜೊತೆಗೆ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆರೋಗ್ಯದಾಯಕ ಕೃಷಿ ಬಗ್ಗೆಯೂ ಆಸಕ್ತಿ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ.
ಇಲ್ಲಿನ ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಶನಿವಾರ ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿ ಕೃಷಿ ಚಟುವಟಿಕೆ ವೀಕ್ಷಿಸಿದ ಬಳಿಕ ಅವರು ಮಾಹಿತಿ ನೀಡಿದರು. ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್, ಮುಖ್ಯಶಿಕ್ಷಕ ರಮಾನಂದ, ಶಿಕ್ಷಕಿ ಅನಿತಾ, ಪುರುಷೋತ್ತಮ ಅಂಚನ್ ಮತ್ತಿತರರು ಇದ್ದರು.
