ಪುತ್ತೂರು: ಹಿಜಾಬ್ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಮುಸ್ಲಿಂ ಸಂಘಟನೆಗಳ ಮುಖಂಡರು ಕರೆಕೊಟ್ಟ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ಮುಸಲ್ಮಾನ ಧರ್ಮದವರು ಬೆಂಬಲ ವ್ಯಕ್ತಪಡಿಸಿದ್ದು, ಬಹುತೇಕ ಅಂಗಡಿ ಸಂಸ್ಥೆಗಳು ವ್ಯವಹಾರ ಸ್ಥಗಿತಗೊಳಿಸಿವೆ.

ಬೆಳಗ್ಗಿನಿಂದಲೇ ಮುಸ್ಲಿಮರಿಗೆ ಸೇರಿದ ಬಹುತೇಕ ಅಂಗಡಿಗಳು, ಮಳಿಗೆಗಳು, ಹೊಟೇಲ್ ಗಳು ತೆರೆಯಲಿಲ್ಲ. ಕೆಲವು ಶಿಕ್ಷಣ ಸಂಸ್ಥೆಗಳು, ಮದ್ರಸಗಳಿಗೆ ರಜೆ ಸಾರಲಾಗಿದೆ. ಮುಸ್ಲಿಂ ಮಾಲಕತ್ವದ ಕಚೇರಿಗಳು, ವರ್ಕ್ ಶಾಪ್ಗಳು ವ್ಯವಹಾರ ಸ್ಥಗಿತಗೊಳಿಸಿತ್ತು. ಈ ನಡುವೆ ಮುಸ್ಲಿಮರಿಗೆ ಸೇರಿದ ಕೆಲವೊಂದು ಆಟೋ ರಿಕ್ಷಾಗಳು ಅಲ್ಲಿ ಇಲ್ಲಿ ಓಡಾಟ ನಡೆಸುತ್ತಿತ್ತು. ಪುತ್ತೂರು ಕೆಎಸ್ಸಾರ್ಟಿಸಿ ಬಸ್ನಿಲ್ದಾದ ಕಟ್ಟಡದಲ್ಲಿ ಮತ್ತು ಕಟ್ಟಡದ ಎದುರಿನ ಕಟ್ಟಡದಲ್ಲಿ ಬಹುತೇಕ ಅಂಗಡಿಗಳು ಮುಚ್ಚಲ್ಪಟ್ಟಿತ್ತು. ನಗರಸಭೆ ಹಸಿ ಮತ್ತು ಒಣಮೀನು ಮಾರುಕಟ್ಟೆ ಮುಚ್ಚಲ್ಪಟ್ಟಿತ್ತು. ನಗರದ ಪ್ರಮುಖ ರಸ್ತೆಗಳಲ್ಲಿ ಪೋಲೀಸರು ಬಂದೋಬಸ್ತ್ನಲ್ಲಿದ್ದರು.

