ಬಂಟ್ವಾಳ: ತಾಲ್ಲೂಕಿನ ಸರಪಾಡಿ ಸಮೀಪದ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾ.20ರಂದು ಭಾನುವಾರ ನಡೆದ ಹೊರೆಕಾಣಿಕೆ ಮೆರವಣಿಗೆಯಲ್ಲಿ ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ, ಕ್ಷೇತ್ರದ ಧರ್ಮದರ್ಶಿ ದೇಜಪ್ಪ ಬಾಚಕೆರೆ, ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಬಿ.ಸಿ.ರೋಡು ಮತ್ತಿತರರು ಪಲ್ಲಕಿ ಸಹಿತ ದೇವರ ಉತ್ಸವಮೂರ್ತಿ ಸಮರ್ಪಿಸಿದರು. ಹೊರೆಕಾಣಿಕೆ ಮೆರವಣಿಗೆಯಲ್ಲಿ ಕಲ್ಲಡ್ಕ ಕೀಲು ಕುದುರೆ ಮತ್ತು ಗೊಂಬೆ ಕುಣಿತ ಗಮನ ಸೆಳೆಯಿತು.

