ಬಂಟ್ವಾಳ: ರಾಜ್ಯ ಸರ್ಕಾರದ ಸುತ್ತೋಲೆಯಂತೆ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ನಿರ್ಮಿಸಲು ಜಮೀನು ಮೀಸಲಿಡಬೇಕಾಗಿದೆ. ಇದರಿಂದಾಗಿ ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತಿತರ ಜಲಕಾಯ / ಜಲಮೂಲ ಎಂದು ವರ್ಗೀಕೃತವಾದ ಜಮೀನು ಹಾಗೂ ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಎಲ್ಲಾ ಸರ್ಕಾರಿ ಜಮೀನು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಜಿಲ್ಲಾಧಿಕಾರಿ ಅಥವಾ ತಹಸೀಲ್ದಾರ್ ಗೆ ದೂರು ನೀಡಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
