ಬಂಟ್ವಾಳ: ತಾಲ್ಲೂಕಿನ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಪ್ರಯುಕ್ತ ಬಂಟ್ವಾಳ ಎಸ್.ವಿ.ಎಸ್.ಮೈದಾನದಲ್ಲಿ ಭಾನುವಾರ ನಡೆದ ಕ್ರೀಡಾಕೂಟ ಸಮಾರೋಪ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯಕ್ಕೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೂಲಭೂತ ಸೌಲಭ್ಯ ನೀಡಲು ಆದ್ಯತೆ ನೀಡುವುದಾಗಿ ಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇಲ್ಲಿನ ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಪ್ರಯುಕ್ತ ಬಂಟ್ವಾಳ ಎಸ್.ವಿ.ಎಸ್.ಮೈದಾನದಲ್ಲಿ ಭಾನುವಾರ ನಡೆದ ಕ್ರೀಡಾಕೂಟ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂಘದ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುರಸಭಾ ಸದಸ್ಯರಾದ ಜನಾರ್ದನ ಚಂಡ್ತಿಮಾರ್, ಹರಿಪ್ರಸಾದ್, ಸಂಘದ ಗೌರವಾಧ್ಯಕ್ಷ ದೇವದಾಸ್ ಕೃಷ್ಣಾಪುರ, ಕಾರ್ಯದರ್ಶಿ ಕರುಣಾಕರ ಕಾಡಬೆಟ್ಟು, ಕೋಶಾಧಿಕಾರಿ ಪ್ರದೀಪ್ ವಾಮದಪದವು, ಶೀನ ಚಂಡ್ತಿಮಾರ್, ಚಂದಪ್ಪ ವಾಮದಪದವು ಮತ್ತಿತರರು ವಿಜೇತರಿಗೆ ಬಹುಮಾನ ವಿತರಿಸಿದರು. ಆರಂಭದಲ್ಲಿ ನಡೆದ ಪುರುಷರ ಕ್ರಿಕೆಟ್ ಪಂದ್ಯಾಟ, ಮಹಿಳೆಯರ ತ್ರೋಬಾಲ್, ಪುರುಷರ ಮತ್ತು ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಗೆ ಸಂಘದ ಜಿಲ್ಲಾಧ್ಯಕ್ಷ ಶಿವಾನಂದ ಬಲ್ಲಾಲ್‌ಬಾಗ್ ಚಾಲನೆ ನೀಡಿದರು.
