ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಎ.09ರಂದು ಶನಿವಾರ ರಾತ್ರಿ ನಡೆದ ಧಾರ್ಮಿಕ ಸಭೆಗೆ ಸುಬ್ರಹ್ಮಣ್ಷ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಚಾಲನೆ ನೀಡಿದರು.11btl-Badanady

ಧಾರ್ಮಿಕತೆ ಮೂಲಕ ಸಾಮಾಜಿಕ ಪ್ರಗತಿ ಮತ್ತು ಸದೃಢ ಸಮಾಜ ನಿರ್ಮಾಣದ ಜೊತೆಗೆ ಜೀವನದ ಸಾರ್ಥಕತೆಯೂ ಸಾಧ್ಯವಾಗುತ್ತದೆ ಎಂದು ಸುಬ್ರಹ್ಮಣ್ಷ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಇಲ್ಲಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ಕ ಶನಿವಾರ ರಾತ್ರಿ ನಡೆದ ಧಾರ್ಮಿಕ ಸಭೆ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಕರಿಂಜೆ ಕ್ಷೇತ್ರದ ಮುಕ್ತಾನಂದ ಸ್ವಾಮಿ ಮಾತನಾಡಿ, ಧರ್ಮ ಸಭೆಯಲ್ಲಿ ಸನಾತನ ಹಿಂದೂ ಧರ್ಮದ ಬಗ್ಗೆ ಮಾತನಾಡಿದರೆ ಕೋಮುವಾದಿ ಎನ್ನುವ ಕೀಳು ಮಟ್ಟದ ರಾಜಕೀಯ ಸಲ್ಲದು ಎಂದರು.

ಹಾಸನ ಅರೆಮಾದನಹಳ್ಳಿ ಶಿವಸುಜ್ಞಾನ ತೀರ್ಥ ಮಹಾಸ್ವಾಮಿ ಮಾತನಾಡಿ, ಭಜನೆ ಮೂಲಕ ಆಧ್ಯಾತ್ಮಿಕ ಸಾಧನೆ ಸುಲಭ ಸಾಧ್ಯ ಎಂದರು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸತೀಶ ಶೆಟ್ಟಿ, ಉಪ ತಹಶೀಲ್ದಾರ್ ನವೀನ ಬೆಂಜನಪದವು, ದಿವಾಕರ ಮುಗುಳ್ಯ ಪಡ್ಜಾಲು ಶುಭ ಹಾರೈಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ರಾಜಾ ಎಸ್.ಹೊಳ್ಳ ಪತ್ತುಮುಡಿ, ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಚೌಟ, ಉಪಾಧ್ಯಕ್ಷ ಮೋನಪ್ಪ ಆಚಾರ್ಯ ಬೈದಗುತ್ತು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ, ಹೊರೆಕಾಣಿಕೆ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಅನುವಂಶಿಕ ಮೊಕ್ತೇಸರ ಕೆ.ಸುಂದರ ಹೊಳ್ಳ, ಪ್ರಮುಖರಾದ ರಾಜೇಶ ಗೋವಿಂದಬೆಟ್ಟು, ಶರತ್ ಕುಮಾರ್ ಕೊಯಿಲ, ಆನಂದ ಬುರಾಲು, ಲೋಕೇಶ ಕೈತ್ರೋಡಿ, ಯಶೋಧರ ರೈ ದೇರಾಜೆ, ಮೋಹನ್ ಕೆ.ಶ್ರೀಯಾನ್ ರಾಯಿ, ಶೇಖರ ಅಂಚನ್ ಪಿಲ್ಕಾಜೆಗುತ್ತು, ಪ್ರಭಾಕರ ಪ್ರಭು ಕರ್ಪೆ, ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಸಚ್ಚಿದಾನಂದ ಭಟ್ ಎಡಮಲೆ, ದೇವಪ್ಪ ಕುಲಾಲ್ ಪಂಜಿಕಲ್ಲು, ಸಂತೋಷ್ ಕುಮಾರ್ ಬೆಟ್ಟು, ದೇವಪ್ಪ ಕರ್ಕೇರ ನೆಕ್ಕರೆಗುಳಿ, ಕೆ.ಪರಮೇಶ್ವರ ಪೂಜಾರಿ, ಚಂದ್ರಶೇಖರ ಗೌಡ ಕಾರಂಬಡೆ, ರಾಮಸುಂದರ ಗೌಡ, ಸಂದೇಶ ಮಡಿವಾಳ, ಅರ್ಚಕ ನಾಗೇಶ ರಾವ್ ಮತ್ತಿತರರು ಇದ್ದರು.

ಸಮಿತಿ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ದಿನೇಶ ಸುವರ್ಣ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ ನಡೆದ ಸ್ಥಳೀಯ ಕಲಾವಿದರಿಗೆ ಸನ್ಮಾನ, ದೇವರಿಗೆ ‘ರುದ್ರಯಾಗ’, ಭಜನೆ, ‘ಭಕ್ತ ಮಾರ್ಕಂಡೇಯ’ ಹರಿಕಥೆ, ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯ ವಿದ್ಯಾರ್ಥಿಗಳಿಂದ ‘ನಾಟ್ಯ ಸಿಂಚನ’, ಜಗದೀಶ ಹೊಳ್ಳ ನೇತೃತ್ವದಲ್ಲಿ ‘ಸಂಗೀತ ಭಕ್ತಿ ಗಾನ ಸಂಭ್ರಮ’ ಕಾರ್ಯಕ್ರಮ ಗಮನ ಸೆಳೆಯಿತು.

By Suddi9

Leave a Reply

Your email address will not be published. Required fields are marked *