ವಿಟ್ಲ: ವಿಠಲ ವಿದ್ಯಾ ಸಂಘದ ಆಶ್ರಯದಲ್ಲಿ ನಡೆಯುವ ಫಿಟ್ನೆಸ್, ವಾಲಿಬಾಲ್ ಮತ್ತು ಶಟ್ಲ್ ಬ್ಯಾಡ್ಮಿಂಟನ್ ತರಬೇತಿ ಶಿಬಿರವನ್ನು ಕರ್ನಾಟಕ ಸರಕಾರದ ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ನಿತಿನ್ ಪೂಜಾರಿ ಉದ್ಘಾಟಿಸಿದರು.
ವಿಠಲ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿರುವ ಇವರನ್ನು ಈ ಸಂದರ್ಭದಲ್ಲಿ ವಿದ್ಯಾ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
