ಬಂಟ್ವಾಳ: ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಭಾನುವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ದೇವರ ದಾಸಿಮಯ್ಯ ಜಯಂತಿಯನ್ನು ಆಚರಿಸಲಾಯಿತು. ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು ಅವರು ಸಭೆಯ ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸಿ ಮಾತನಾಡಿ, ಮೊದಲ ವಚನಕಾರರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ದೇವರ ದಾಸಿಮಯ್ಯ ಕಾಯಕವನ್ನೆ ಕೈಲಾಸ ಎಂದು ನಂಬಿ ಬದುಕಿದ ಸಾಧಕ. ಇವರ ಜನಪರ ಕಾಳಜಿಯ ವಚನಗಳು ಇಂದಿಗೂ ಪ್ರಸ್ತುತ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಅವರು ದೇವರ ದಾಸಿಮಯ್ಯ ಬಗ್ಗೆ ಸವಿವರವಾಗಿ ಮಾತನಾಡಿದರು. ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು ಉಪಸ್ಥಿತರಿದ್ದರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಸ್ವಾಗತಿಸಿ ವಂದಿಸಿದರು.
