ಬಂಟ್ವಾಳ: ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಮೇ.03ರಂದು ಮಂಗಳವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಸವ ಜಯಂತಿ ಆಚರಣೆಯನ್ನು ಆಚರಿಸಲಾಯಿತು.WhatsApp Image 2022-05-03 at 12.25.58 PM

ಉಪತಹಶೀಲ್ದಾರ್ ರಾಜೇಶ್ ನಾಯ್ಕ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸಿ ಬಸವಣ್ಣನವರು ೧೨ ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ಅವರು ಸಾಮಾಜಿಕ ತಾರತಮ್ಯ,ಲಿಂಗ ತಾರತಮ್ಯ, ಮೂಡನಂಬಿಕೆಗಳ ವಿರುದ್ಧ ಹೋರಾಡಿ ಜನರನ್ನು ಜಾಗೃತಗೊಳಿಸುವ ಕೆಲಸ ಮಾಡಿದರು.ಬಸವಣ್ಣನವರು ತಮ್ಮ ವಚನಗಳ ಮೂಲಕ ಸಾಮಾಜಿಕ ಅರಿವನ್ನು ಹರಡಿದರು ಎಂದು ಹೇಳಿದರು.

ತಾಲೂಕು ಪಂಚಾಯತ್ ವ್ಯವಸ್ಥಾಪಕಿ ಶ್ರೀಮತಿ ಶಾಂಭವಿ ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಸ್ವಾಗತಿಸಿ ವಂದಿಸಿದರು.

By Suddi9

Leave a Reply

Your email address will not be published. Required fields are marked *