ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ಮಹೋತ್ಸವದ ಪ್ರಯುಕ್ತ ‘ಇನ್ಸ್ಪೈರ್ ೨೦೨೨’ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮವನ್ನು ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಸಲಾಯಿತು.SHV_0086

ಈ ಕಾರ್ಯಕ್ರಮವನ್ನು ವಿಠಲ ಸುಪ್ರಜಿತ್ ಐಟಿಐ ಕಾರ್ಯದರ್ಶಿ ಶ್ರೀಪ್ರಕಾಶ್ ಉದ್ಘಾಟಿಸಿದರು. ವಿಠಲ ವಿದ್ಯಾ ಸಂಘದ ಸಂಚಾಲಕ ಎಲ್ ಎನ್ ಕೂಡೂರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರುಗಳಾದ ನಿತ್ಯಾನಂದ ನಾಯಕ್, ಪದ್ಮಯ್ಯ ಗೌಡ, ಭವಾನಿ ರೈ ಕೊಲ್ಯ ಮತ್ತು ಮಂಗೇಶ್ ಭಟ್ ವಿಟ್ಲ ಉಪಸ್ಥಿತರಿದ್ದರು.

ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಪ್ರಸ್ತಾವಿಸಿ ಸ್ವಾಗತಿಸಿದರು. ಕೃಪಾ ಆಶಯ ಗೀತೆ ಹಾಡಿದರು. ಚಂದ್ರಕಾoತ ವಂದಿಸಿದರು. ಮುಕ್ತಶ್ರೀ ನಿರೂಪಿಸಿದರು. ಉಪನ್ಯಾಸಕರು, ಅಧ್ಯಾಪಕರು ಮತ್ತು ಮಕ್ಕಳು ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *