ಚಂಡೀಗಢ: ವಿಐಪಿ ಸಂಸ್ಕೃತಿಯನ್ನು ಕೊನೆಗೊಳಿಸುವ ಪ್ರಯತ್ನದಲ್ಲಿರುವ ಪಂಜಾಬ್‍ನ ಭಗವಂತ್ ಮಾನ್ ಸರ್ಕಾರವು ಜೈಲಿನಲ್ಲಿರುವ ಎಲ್ಲಾ ವಿಐಪಿ ಕೊಠಡಿಗಳನ್ನು ಜೈಲು ನಿರ್ವಹಣಾ ಬ್ಲಾಕ್‍ಗಳನ್ನಾಗಿ ಪರಿವರ್ತಿಸಲು ಘೋಷಿಸಿದೆ.

jail

ಈ ಬಗ್ಗೆ ಸಿಎಂ ಭಗವಂತ್ ಮಾನ್ ಅವರು ಮಾತನಾಡಿ, ಜೈಲು ಸಿಬ್ಬಂದಿಯ ಸುಗಮ ಕಾರ್ಯ ನಿರ್ವಹಣೆಯನ್ನು ಖಚಿತ ಪಡಿಸಿಕೊಳ್ಳಲು ಜೂಲ್ಲಿನ ಎಲ್ಲಾ ವಿಐಪಿ ಕೊಠಡಿಗಳನ್ನು ಜೈಲು ನಿರ್ವಹಣಾ ಬ್ಲಾಕ್‍ಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಜೈಲಿನಲ್ಲಿ ನಿರ್ಲಕ್ಷ್ಯ ವಹಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

Bhagwant Mann

ಜೈಲು ಕೈದಿಗಳಿಂದ ಮೊಬೈಲ್ ಫೋನ್ ವಶಪಡಿಸಿಕೊಂಡ ಬಗ್ಗೆ ಮಾತನಾಡಿದ ಅವರು, ಜೈಲು ಆವರಣದಲ್ಲಿ ದರೋಡೆಕೋರರಿಂದ 710 ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದೇವೆ. ಅಷ್ಟೇ ಅಲ್ಲದೇ ಫೋನ್‍ಗಳನ್ನು ಒಳಗೆ ಪಡೆದವರ ವಿರುದ್ಧವೂ ಕ್ರಮ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

By Suddi9

Leave a Reply

Your email address will not be published. Required fields are marked *