ಮೂಡುಬಿದರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಶ್ರುತಿ ಎ.ಆರ್. ಅವರು 2013 ನೇ ಸಾಲಿನ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಪಡೆದಿದ್ದಾರೆ.
ಆಳ್ವಾಸ್ ಶಿಕ್ಷಣ ಸಂಸ್ಥೆಯ ಉಚಿತ ಶಿಕ್ಷಣದ ವ್ಯವಸ್ಥೆಯಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಇವರು ಬಾಲ್ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿ ರಾಷ್ಟ್ರಮಟ್ಟ ಹಾಗೂ ಅಖಿಲ ಭಾರತ ಮಟ್ಟದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
mbd_nov6_12
ಬಾಲ್ಬ್ಯಾಡ್ಮಿಂಟನ್ನಲ್ಲಿ 6 ಬಾರಿ ರಾಷ್ಟ್ರೀಯ ಜೂನಿಯರ್, 5 ಬಾರಿ ರಾಷ್ಟ್ರೀಯ ಸೀನಿಯರ್, 3 ಬಾರಿ ರಾಷ್ಟ್ರೀಯ ದಕ್ಷಿಣವಲಯ, 3 ಬಾರಿ ರಾಷ್ಟ್ರೀಯ ಅಖಿಲಭಾರತ ವಿವಿ. ಹಾಗೂ 9 ಬಾರಿ ಅಖಿಲ ಭಾರತ ಮುಕ್ತ ಬಾಲ್ಬ್ಯಾಡ್ಮಿಂಟನ್ ಸ್ಪಧರ್ೆಗಳಲ್ಲಿ ಭಾಗವಹಿಸಿ ವಿವಿಧ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿ ವಿಜೇತರೂ ಆಗಿರುವ ಇವರ ಸಾಧನೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಕನರ್ಾಟಕ ಬಾಲ್ಬ್ಯಾಡ್ಮಿಂಟನ್ ಸಂಸ್ಥೆ ಹಾಗೂ ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ವಿಭಾಗದವರು ಅಭಿನಂದನೆ ಸಲ್ಲಿಸಿದ್ದಾರೆ.

By suddi9

Leave a Reply

Your email address will not be published. Required fields are marked *