ಬಂಟ್ವಾಳ: ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ಕಳೆದ ಸಾಲಿನ ಮುಂಗಾರು ಮತ್ತು ಹಿಂಗಾರು ಸಹಿತ ಬೇಸಿಗೆ ಹಂಗಾಮಿನಲ್ಲಿ ಅರ್ಜಿ ಸಲ್ಲಿಸಿದ ಒಟ್ಟು ೭೭ ಬೆಳೆ ವಿಮೆ ಪ್ರಸ್ತಾವನೆ ಅರ್ಜಿಗಳು ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡಿದೆ. ಈ ಬಗ್ಗೆ ರೈತರು ಆಕ್ಷೇಪಣೆ ಇದ್ದಲ್ಲಿ ಮಾತ್ರ ಅರ್ಜಿ ಮರು ಪರಿಶೀಲನೆಗೆ ಸೂಕ್ತ ದಾಖಲೆ ಪತ್ರ ಸಹಿತ ಕೃಷಿ ಇಲಾಖೆಗೆ ಮನವಿ ಸಲ್ಲಿಸಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗೆ ಬಂಟ್ವಾಳ ಮತ್ತು ಪಾಣೆಮಂಗಳೂರು ಹಾಗೂ ವಿಟ್ಲ ಹೋಬಳಿ ರೈತ ಸಂಪರ್ಕ ಕೇಂದ್ರ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
